ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನೂ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ.
ಈಗ ನಿವೃತ್ತ ಪೊಲೀಸ್ ಅಧಿಕಾರಿಯ ಹತ್ಯೆಯಾಗಿದೆ. ಏನೇ ಆಗಿದ್ದರೂ ಘಟನೆಯನ್ನು ಖಂಡಿಸ್ತೇವೆ. ಇದರಿಂದ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಅಂತ ಗೊತ್ತಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪೊಲೀಸರಿದ್ದಾರೆ. ಕ್ರಮ ಕೈಗೊಳ್ತಾರೆ ಅನ್ನೋ ಭಯ ಹೋಗಿದೆ. ಹಾಗಾಗಿ ಇಂತಹ ಘಟನೆಗಳು ನಡೆಯುತ್ತಿದೆ. ಪೊಲೀಸ್ ಇಲಾಖೆ ಯಾರು ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಬೇಕು” ಎಂದು ಗೃಹ ಸಚಿವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.