ಬೆಂಗಳೂರು: ನಿವೃತ್ತ ಡಿಜಿಪಿ ಓಂಪ್ರಕಾಶ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಓಂಪ್ರಕಾಶ್ ಅವರ ಪತ್ನಿ ಪಲ್ಲವಿ A1, ಮಗಳು ಕೃತಿ A2 ಆಗಿದ್ದಾರೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಇನ್ನೂ ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025 ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂ ಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು. ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ. ಓಂ ಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಹೇಳಿದರು.