ಅಥಣಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಂತೇಶ ಹಿಪ್ಪರಗಿ ಬಂಧಿತ ಆರೋಪಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಈ ವಿಚಾರವನ್ನು ಪೊಲೀಸರ ಬಳಿ ಹೇಳಿಕೊಂಡಿದ್ದು, ಹೆತ್ತವರು ಐಗಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನನಗೆ ಕಂಡಕ್ಟರ್ ಬೇಡ ವಾಚ್ ಮೆನ್ ಕೆಲಸ ಕೊಡಿ ; ಜನತಾ ದರ್ಶನದಲ್ಲಿ ವ್ಯಕ್ತಿಯ ಪಟ್ಟು, ಸಚಿವರು ಗರಂ
ಪೋಕ್ಸೋ ಕೇಸ್ ದಾಖಲಿಸಿಕೊಂಡ ಐಗಳಿ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.