ಚಿಕ್ಕಮಗಳೂರು:- ಹಣಕಾಸಿನ ವಿಚಾರಕ್ಕೆ ಯುವಕನ ಬರ್ಬರ ಕೊಲೆ ನಡೆದಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ರೋಹಿತ್ ಶರ್ಮಾ ನಿವೃತ್ತಿ ಆಗೋದು ಡೌಟ್: ಹಿಟ್ ಮ್ಯಾನ್ ಗೆ ದೊರೆತ A+ ದರ್ಜೆ!
ಸಂಜುನಾಯ್ಕ ಮೃತ ದುರ್ದೈವಿ. ರುದ್ರೇಶ್ ನಾಯ್ಕ (30) ಹತ್ಯೆಗೈದ ಆರೋಪಿಯಾಗಿದ್ದಾನೆ. ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ