ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
2023ರ ಸೆಪ್ಟೆಂಬರ್ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಲು ಸೌದಿ ಅರೇಬಿಯಾ ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಸದ್ಯ ಈ ಭೇಟಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಜೊತೆಗೆ ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ವಿವಿಧ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ದ್ವಿಪಕ್ಷೀಯ ಮಾತುಕತೆ ಬಳಿಕ ಇಂಧನ, ರಕ್ಷಣೆ ಮತ್ತು ವ್ಯಾಪಾರದಂತಹ ನಿರ್ಣಾಯಕ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಜೊತೆಗೆ ಸೌದಿಯ ರಾಜಧಾನಿ ರಿಯಾದ್ನ 100 ಬಿಲಿಯನ್ ಡಾಲರ್ ಹೂಡಿಕೆ ಯೋಜನೆಯನ್ನು ಭಾರತಕ್ಕಾಗಿ ತ್ವರಿತಗೊಳಿಸುವ ಸಾಧ್ಯತೆಯಿದೆ. ಬಳಿಕ ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಮೋದಿ-ಸಲ್ಮಾನ್ ದ್ವಿಪಕ್ಷೀಯ ಮಾತುಕತೆಯ ನಂತರ ಹಸಿರು ಹೈಡ್ರೋಜನ್ ಸೇರಿ ಹಲವು ಒಪ್ಪಂದಗಳಿಗೆ ಎರಡೂ ಕಡೆಯವರು ಸಹಿ ಹಾಕುವ ನಿರೀಕ್ಷೆಯಿದೆ ಎಂದು ತಿಳಿಸಿದ್ದರು.