ವಿಜಯನಗರ:- ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.
Wing Commander Case: ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ: ಹಲ್ಲೆಗೊಳಗಾದ ಯುವಕನ ತಾಯಿ ಬೇಸರ
26 ವರ್ಷದ ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್(26) ಹಲ್ಲೆ ಮಾಡಿದ ಪ್ರೇಮಿ. ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.