ಚಿಕ್ಕೋಡಿ:- KSRTC ಬಸ್ ಸ್ಟೆರಿಂಗ್ ರಾಡ್ ಕಟ್ ಆಗಿ ಬಸ್ ಒಂದು ಕಂದಕಕ್ಕೆ ಉರುಳಿರುವ ಘಟನೆ ಬೆಳಗಾವಿ ಜಿಲ್ಲೆಯ ಸತ್ತಿ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ನಿಮಗೆ ರಕ್ತ ಕಡಿಮೆ ಇದ್ಯಾ!? ಹಾಗಿದ್ರೆ ಹೆಚ್ಚಾಗಲು ಈ ಆಹಾರ ತಪ್ಪದೇ ಸೇವಿಸಿ!
ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಈ ಬಸ್, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಡಿಪೋಗೆ ಸೇರಿದೆ. ಸತ್ತಿ ಗ್ರಾಮದಿಂದ ಅಥಣಿ ಕಡೆಗೆ ಬರುತ್ತಿದ್ದಂತೆ ಏಕಾಏಕಿ ಸ್ಟೇರಿಂಗ್ ರಾಡ್ ಕಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಸ್ ಉರುಳಿದೆ.
ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್ ಆಗಿದ್ದು, ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.