ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಬಹುಕಾಲದ ಗನ್ ಮ್ಯಾನ್ ವಿಠ್ಠಲನ್ನ ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಡದಿ ಠಾಣೆ ಪೊಲೀಸರು, ಮನ್ನಪ್ಪ ವಿಠ್ಠಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸ್ವಯಂ ದಾಳಿ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ ಎಂಬ ಅನುಮಾನ ಪೊಲೀಸರಿಗೂ ಮೂಡಿದೆ. ರಿಕ್ಕಿ ರೈಗೆ ಮೂವರು ಗನ್ ಮ್ಯಾನ್ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಹೀಗಾಗಿ ರಿಕ್ಕಿ ರೈ ಗನ್ಮ್ಯಾನ್ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ ಎನ್ನಲಾಗಿದೆ.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಿಕ್ಕಿ ರೈ ಮನೇಲಿಯಲ್ಲಿನ ಗನ್ ಹಾಗೂ ಬುಲೆಟ್ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.