ಮಂಡ್ಯ : ಕನ್ನಡದ ಹುಡುಗ ವಿಕಾಸ್ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದ್ದರೂ ತಪ್ಪೇ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಮಂಡ್ಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹುಡುಗ ವಿಕಾಸ್ ಮೇಲೆ ಹಲ್ಲೆ ಮಾಡಿರುವ ಡಿಅರ್ಡಿಒ ಉದ್ಯೋಗಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಎರಡೂ ಕಡೆಯವರು ದೂರು ಸಲ್ಲಿಸಿದ್ದಾರ. ಹಲ್ಲೆ ಮಾಡಿದವ ವಿಂಗ್ ಕಮಾಂಡರ್ ಆಗಿರಲಿ, ಮತ್ತೇನಾದರೂ ಅಗಿರಲಿ, ಕಾನೂನಿನ್ವಯ ಕ್ರಮ ಜರುಗಿಸಲು ಹೇಳಿದ್ದೇನೆ ಎಂದರು.
ವಿಂಗ್ ಕಮಾಂಡರ್ʼನ ಅಸಲಿ ಬಣ್ಣ ಬಯಲು: ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು!
ಇದೇ ವೇಳೆ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದರು.