ಬೆಂಗಳೂರು: ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ ಹಾಗೂ ಬೈಕ್ ಸವಾರ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನೂ ಈ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ. ಹಲ್ಲೆಗೆ ಒಳಗಾದ ಯುವಕ ಕೂಡ ದೂರು ನೀಡಿದ್ದಾನೆ. ಹಲ್ಲೆ ಮಾಡಿದ ವಿಂಗ್ಕಮಾಂಡರ್ ವೆಸ್ಟ್ ಬೆಂಗಾಲ್ ಮೂಲದವನು. ಸದ್ಯ ಆತ ನಾಪತ್ತೆ ಆಗಿದ್ದಾನೆ’ ಎಂದರು.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಂಬಾತ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಕಾರಣಕ್ಕಾಗಿ ತಗಾದೆ ತೆಗೆದು ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ. ಬಳಿಕ ವಿಡಿಯೋ ಮಾಡಿ ಬೈಕ್ ಸವಾರನ ವಿರುದ್ಧ ಆರೋಪ ಮಾಡಿದ್ದ. ಅಲ್ಲದೆ ಕನ್ನಡ ಮಾತನಾಡಲಿಲ್ಲ ಎಂಬ ಕಾರಣಕ್ಕಾಗಿ ಹಲ್ಲೆ ಮಾಡಲಾಗಿದೆ ಎಂದೂ ಆರೋಪಿಸಿದ್ದನು.
ಆದರೆ ಈ ಘಟನೆ ಕುರಿತಾದ ಸಿ.ಸಿ ಕ್ಯಾಮೆರಾ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಡಿದಾಡುತ್ತಿದೆ. ಇದರಲ್ಲಿ ವಿಂಗ್ ಕಮಾಂಡರ್ ಬೋಸ್ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ನಿಟ್ಟಿನಲ್ಲಿ ಕನ್ನಡ ಪರ ಹೋರಾಟಗಾರರು ಧ್ವನಿ ಎತ್ತಿದ್ದರು. ವಿಂಗ್ ಕಮಾಂಡರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.