ಬೆಳಗಾವಿ : ವೈದ್ಯರೊಬ್ಬ ಕುಡಿದ ಮತ್ತಿನಲ್ಲಿ ರೋಗಿಯ ತಪಾಸಣೆ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಭಾನುವಾರ ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿಯೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ ರೋಗಿಯ ತಪಾಸಣೆ ನಡೆಸಿದ್ದಾರೆ. ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ದೀಕರಣ ; ಮೂವರ ವಿರುದ್ಧ ಎಫ್ಐಆರ್
ಬಳಿಕ ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.