ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆದಿದ್ದು, ಐವರು ಮೃತರಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಇನ್ನೂ ಈ ದುಷ್ಕೃತ್ಯವನ್ನು ಕಣ್ಣಾರೆ ಕಂಡ ಪ್ರತ್ಯಕ್ಷ ದರ್ಶಿಗಳು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ. ಈ ಉಗ್ರರು ನೀವು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಶಿವಮೊಗ್ಗದ ಪ್ರವಾಸಿಗ ಸೇರಿ ಮೂವರು ಸಾವು
ಇನ್ನೂ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಸಹ ಬಲಿಯಾಗಿದ್ದಾರೆ . ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ.