ಶ್ರೀನಗರ/ಹಾವೇರಿ : ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ಇಬ್ಬರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ. ದ
ಹಾವೇರಿಯ ರಾಣೆಬೆನ್ನೂರು ಮೂಲದ ಭರತ್ ಭೂಷಣ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಭರತ್ ಅವರು ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡ ಅವರ ಅಳಿಯನ ಸ್ನೇಹಿತ ಎಂಬ ಮಾಹಿತಿ ಇದೆ. ಇದಕ್ಕೂ ಮೊದಲು ದಾಳಿಯಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಮಂಜುನಾಥ್ ಎಂಬವರು ಸಾವಿಗೀಡಾಗಿದ್ದರು.
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.