ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಈವರೆಗೂ ಸುಮಾರು 27ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಲ್ಲಿ ಕರ್ನಾಟಕ ಮೂಲದ ಇಬ್ಬರೂ ಸೇರಿದ್ದಾರೆ. ಇನ್ನೂ ಉಗ್ರ ದಾಳಿಯ ಬಳಿಕ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.
“ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ.
ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.