ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ.
ಕೊಲ್ಲಲ್ಪಟ್ಟವರಲ್ಲಿ ಇಬ್ಬರು ವಿದೇಶಿಯರು (ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೇಪಾಳದವರು) ಮತ್ತು ಇಬ್ಬರು ಸ್ಥಳೀಯ ನಿವಾಸಿಗಳು ಸೇರಿದ್ದಾರೆ. 26 ಜನರಲ್ಲಿ 22 ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸಲಾಗುತ್ತಿದೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು-ಕಾಶ್ಮೀರ ಸರ್ಕಾರ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದೆ.
ಉಗ್ರರ ದಾಳಿಯಿಂದ ಪ್ರಾಣ ಕಳೆದುಕೊಂಡ 26 ಮಂದಿಯ ಪಾರ್ಥಿವ ಶರೀರಗಳನ್ನು ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರಿಸಲಾಗಿದೆ. ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಯಿತು. ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದರು.