ಬೆಂಗಳೂರು:- ಅತ್ಯಾಚಾರ ಕೇಸ್ ಗೆ ಸಂಬಧಪಟ್ಟಂತೆ ಬೇರೆ ಕೋರ್ಟ್ಗೆ ಪ್ರಕರಣ ವರ್ಗಾಯಿಸಲು ಕೋರಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಲಾಗಿದೆ.
ಕಾಶ್ಮೀರದಲ್ಲಿ ಉಗ್ರರ ದಾಳಿ: ಹಿಂದೂ ಪರ ಸಂಘಟನೆಗಳಿಂದ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣ ವರ್ಗಾವಣೆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣವನ್ನು ಬೇರೆ ಕೋರ್ಟ್ಗೆ ವರ್ಗಾಯಿಸುವಂತೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಪ್ರಧಾನ ಸಿಟಿ ಸಿವಿಲ್ ಕೋರ್ಟ್, ವಿಚಾರಣೆ ವಿಳಂಬಗೊಳಿಸುವ ಪ್ರಯತ್ನಗಳಿಗೆ ಖಂಡನೆ ವ್ಯಕ್ತಪಡಿಸಿ, ವಿಚಾರಣೆ ಮುಂದುವರಿಸುವಂತೆ ಸೂಚನೆ ನೀಡಿ ಅರ್ಜಿ ವಜಾಗೊಳಿಸಿದೆ.
ಇನ್ನು, ಈ ಪ್ರಕರಣದಿಂದ ನಿವೃತ್ತರಾಗಲು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ನಿಶ್ಚಯಿಸಿದ್ದರು. ಈ ಸಂಬಂಧ ನ್ಯಾಯಾಲಯಕ್ಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಕೀಲ ಜಿ.ಅರುಣ್ ಪ್ರಕರಣದಿಂದ ನಿವೃತ್ತರಾಗಲು ಅನುಮತಿ ನೀಡಿದೆ. ಹೀಗಾಗಿ, ಬೇರೆ ವಕೀಲರನ್ನು ನಿಯೋಜಿಸಲು ಪ್ರಜ್ವಲ್ ರೇವಣ್ಣ ಸಮಯ ಕೇಳಿದ್ದಾರೆ. ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಕ್ಕೆ ಮುಂದೂಡಿದೆ.