ಬೆಂಗಳೂರು:- ಮಂಗಳವಾರ ನಡೆದ ಭೀಕರ ಉಗ್ರರ ದಾಳಿಯಲ್ಲಿ ಒಟ್ಟು 26 ಮಂದಿ ರಕ್ಕಸರ ದಾಳಿಗೆ ಉಸಿರು ಚೆಲ್ಲಿದ್ದಾರೆ. ಇದರಲ್ಲಿ ಕನ್ನಡಿಗರು ಮೂವರು ದುರ್ಮರಣ ಹೊಂದಿದ್ದಾರೆ.
IPL 2025: ಹೈದರಾಬಾದ್ ವಿರುದ್ಧ ಮುಂಬೈ ಗೆಲ್ಲುತ್ತಿದ್ದಂತೆ ಆರ್ ಸಿಬಿಗೆ ಬಿಗ್ ಶಾಕ್! ಏನಾಯ್ತು?
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಜೀವ ಕಳೆದುಕೊಂಡ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಶಿಫ್ಟ್ ಆಗಿವೆ. ಶಿವಮೊಗ್ಗದ ಮಂಜುನಾಥ್ ಹಾಗೂ ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹಗಳು ತಾಯ್ನಾಡು ತಲುಪಿದ್ದು, ಬೆಂಗಳೂರು ಏರ್ಫೋರ್ಟ್ಗೆ ಬಂದ ಮೃತದೇಹಗಳನ್ನು ಆ್ಯಂಬುಲೆನ್ಸ್ ಮೂಲಕ ತವರೂರಿಗೆ ಕಳುಹಿಸಲಾಗಿದೆ.
ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯಿಂದ ಬೆಂಗಳೂರು ಏರ್ಪೋರ್ಟ್ ತಲುಪಿದೆ. ವಿಮಾನ ನಿಲ್ದಾಣದಲ್ಲೇ ಎಲ್ಲಾ ಪ್ರಕ್ರಿಯೆ ಮುಗಿಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗದತ್ತ ಸಾಗಿದೆ. ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ಕಾರ್ಗೋ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿಗೆ ತರಲಾಯಿತು. ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ನಮನ ಸಲ್ಲಿಸಿದರು. ಇದೇ ವೇಳೆ ಸಂತ್ರಸ್ತ ಕುಟುಂಬಸ್ಥರಿಗೆ ವಿ. ಸೋಮಣ್ಣ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಉಗ್ರರು ಅಮಾಯಕ ಜನರನ್ನ ಬಲಿ ಪಡೆದಿದ್ದಾರೆ. ಮುಗ್ಧರ ಕೊಲೆ ಮಾಡಿರುವರನ್ನ ತಕ್ಕ ಶಿಕ್ಷೆ ಕೊಡ್ತೀವಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದರು
ಇನ್ನು ಮಂಜುನಾಥ್ ಮೃತದೇಹ ತವರೂರು ಶಿವಮೊಗ್ಗದತ್ತ ಹೊರಟಿದ್ದು, ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ತಲುಪಬಹುದು ಅಂತ ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ. ಮಂಜುನಾಥ್ ಪಾರ್ಥಿವ ಶರೀರದ ದರ್ಶನಕ್ಕೆ ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಅರ್ಧ ದಿನ ಅಂಗಡಿ ಬಂದ್ ಮಾಡಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜ್ಯುವೆಲ್ಲರಿ ಶಾಪ್, ಹೋಟೆಲ್, ವರ್ತಕರ ಸಂಘ ತೀರ್ಮಾನ ಮಾಡಿದೆ.