Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Pahalgam Attack: ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ: ಸಿಎಂ ಸಿದ್ದರಾಮಯ್ಯ

    By Author AINApril 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು, ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?

    ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

    ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

    ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

    ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

    ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ

    June 18, 2025

    ನೀವು ಮನಸ್ಸು ಮಾಡಿದರೆ ಮೇಲಕ್ಕೂ ಏರಿಸಬಹುದು, ಕೆಳಕ್ಕೂ ಬೀಳಿಸಬಹುದು: ಡಿ.ಕೆ. ಶಿವಕುಮಾರ್

    June 18, 2025

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 18, 2025

    ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು 6,483ಕ್ಕೆ ಇಳಿಕೆ..! ಸಾವಿನ ಸಂಖ್ಯೆ 113 ಕ್ಕೆ ಏರಿಕೆ

    June 18, 2025

    ನಮ್ಮ ನಂದಿನಿ ಒಕೆ.. ಅಮುಲ್ ಯಾಕೆ? BMRCL ನಡೆಗೆ ಸಾರ್ವಜನಿಕರಿಂದ ಆಕ್ಷೇಪ – JDS ವಾಗ್ದಾಳಿ

    June 18, 2025

    Amit Shah: ಜೂನ್ 19ಕ್ಕೆ ಕರ್ನಾಟಕಕ್ಕೆ ಬರಲಿದ್ದಾರೆ ಚುನಾವಣಾ ಚಾಣಕ್ಯ ಅಮಿತ್ ಶಾ..!

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.