ಚಾಮರಾಜನಗರ : ಪ್ರಸಿದ್ದ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ವಜ್ರಮಲೆ ವಸತಿ ಗೃಹ ಎದುರಿನ ಆವರಣದಲರಲ ಜರ್ಮನ್ ಟೆಂಟ್ ಅಳವಡಿಸಿದ್ದು, ಅಲ್ಲಿಯೇ ಸಭೆಯ ನಡೆಯಲಿದೆ.
ಇನ್ನೂ ಸಚಿವ ಸಂಪುಟ ಸಭೆಯಲ್ಲೆಯ ಮೈಸೂರು ಭಾಗದ ಜಿಲ್ಲೆಗಳ ಅಭಿವೃದ್ದಿ ಕುರಿತು ಚರ್ಚೆಯಾಗಲಿದೆ. ಎಂಟು ಜಿಲ್ಲೆಗಳ ವಿವಿಧ ಯೋಜನೆಗಳ ಬಗ್ಗೆ ಚರ್ಚೆಯಾಗಲಿದ್ದು, ಅನುಮೋದನೆ ಸಾಧ್ಯತೆಯಿದೆ. ಜೊತೆಗೆ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಸಿಗುವ ಸಾಧ್ಯತೆ ಇದೆ.
ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ; ಸ್ಥಳೀಯ ಶಾಸಕರ ಕಡೆಗಣನೆ – ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣ ಅಸಮಾಧಾನ
ಇಂದು ಬೆಳಗ್ಗೆ 11:30ಕ್ಕೆ ಹೆಲಿಕಾಪ್ಟರ್ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಮಹದೇಶ್ವರರ ಇತಿಹಾಸ ಸಾರುವ ಮ್ಯೂಸಿಯಂ, 376 ಕೊಠಡಿಗಳ ವಸತಿ ಗೃಹ, 1 ಮೆಗಾ ವ್ಯಾಟ್ ಸೋಲಾರ್ ಪ್ಲಾಂಟ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ಬಳಿಕ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದ್ದು, ಬಳಿಕ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಜೆ 4:00 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದೆ.