ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಖಾಮುಖಿ ಪಂದ್ಯ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ.
ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?
ಇನ್ನೂ ಸ್ಟೇಡಿಯಂ ಸುತ್ತಮುತ್ತ ಸಂಜೆ ವೇಳೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣದ ಯೋಜನೆ ರೂಪಿಸಿವುದು ಒಳಿತು. ಸಂಚಾರ ನಿರ್ಬಂಧ, ಪಾರ್ಕಿಂಗ್ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರಿಂದ ಇತ್ತೀಚಿನ ಪ್ರಕಟಣೆ ಬಿಡುಗಡೆ ಆಗಿಲ್ಲ. ಆದಾಗ್ಯೂ, ಈ ಹಿಂದಿನ ಪಂದ್ಯಗಳ ವೇಳೆ ಜಾರಿಯಲ್ಲಿದ್ದ ಸಂಚಾರ ನಿರ್ಬಂಧ ಜಾರಿಯಲ್ಲಿರುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗಬಹುದು?
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀಧಿ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ.
ಎಲ್ಲೆಲ್ಲಿ ವಾಹನ ಪಾರ್ಕಿಂಗ್?
ಈ ಹಿಂದಿನ ಪಂದ್ಯಗಳ ವೇಳೆ ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿತ್ತು. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಒದಗಿಸಲಾಗಿತ್ತು. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿತ್ತು.