ಶಿವಮೊಗ್ಗ: ಪಹಲ್ಗಾಮ್ನಲಲಿ ಭಯೋತ್ಪಾದಕರ ದುಷ್ಕೃತ್ಯಕ್ಕೆ ಬಲಿಯಾದ ಉದ್ಯಮಿ ಮಂಜುನಾಥ್ ರಾವ್ ಮೃತದೇಹ ಶಿವಮೊಗ್ಗಕ್ಕೆ ತಲುಪಿದೆ.
ಗುರುವಾರ ಬೆಂಗಳೂರಿಗೆ ಮಂಜುನಾಥ್ ರಾವ್ ಪಾರ್ಥೀವ ಶರೀರ ತರಲಾಯಿತು. ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗ ಮಾರ್ಗವಾಗಿ ಮಂಜುನಾಥ್ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ರವಾನಿಸಲಾಯಿತು. ಇದೇ ವೇಳೆ ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಕಾಶ್ಮೀರದಲ್ಲಿ ಉಗ್ರರ ದಾಳಿ: ಗುಂಡಿನ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಅರ್ಪಣೆ!
ಮಂಜುನಾಥ್ ರಾವ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.