ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಬುಧವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5ನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿತು. ಈ ಗೆಲುವಿನೊಂದಿಗೆ, ಜಸ್ಪ್ರೀತ್ ಬುಮ್ರಾ ಹೆಸರಿನಲ್ಲಿ ದೊಡ್ಡ ದಾಖಲೆಯೂ ನಿರ್ಮಾಣ ಆಗಿದೆ.
ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?
ಇನ್ನೂ ಈ ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಜಯವು ನಿಜಕ್ಕೂ ಖುಷಿ ಕೊಟ್ಟಿದೆ. ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನೋಡಿ ಸಂತೋಷವಾಯಿತು. ಎಲ್ಲಾ ಆಟಗಾರರು ಫಾರ್ಮ್‌ನಲ್ಲಿರುವಾಗ, ನಾವು ಪ್ರಾಬಲ್ಯ ಸಾಧಿಸುತ್ತೇವೆ. ಇದುವೇ ನಮ್ಮ ಗೆಲುವಿನ ಸೀಕ್ರೆಟ್ ಎಂದಿದ್ದಾರೆ.
ಇನ್ನು ದೀಪಕ್ ಚಹರ್ ಮತ್ತು ಟ್ರೆಂಟ್ ಬೌಲ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಪ್ರತಿಯೊಬ್ಬರು ಉತ್ತಮ ಪ್ರದರ್ಶನ ನೀಡಿದರೆ ಗೆಲುವು ಸುಲಭ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಇದೇ ವೇಳೆ ದೀಪಕ್ ಚಹರ್ಗೆ ಸತತ 4 ಓವರ್ಗಳನ್ನು ನೀಡಿರುವ ಬಗ್ಗೆ ಕೇಳಿದಾಗ, ಕೆಲ ಬಾರಿ ಪರಿಸ್ಥಿತಿಗೆ ಅನುಗುಣವಾಗಿ ನಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅನೇಕ ವಿಷಯಗಳನ್ನು ಮುಂಚಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಅವರು ಪವರ್‌ಪ್ಲೇನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರು. ಹೀಗಾಗಿ ಓವರ್ ಅನ್ನು ನಿಲ್ಲಿಸಲು ಯಾವುದೇ ಕಾರಣವಿರಲಿಲ್ಲ. ಹೀಗಾಗಿ ಅವರಿಂದಲೇ ಬ್ಯಾಕ್ ಟು ಬ್ಯಾಕ್ ಓವರ್ಗಳನ್ನು ಹಾಕಿಸಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.