Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು: ಡಿ.ಕೆ. ಸುರೇಶ್

    By Author AINApril 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: “ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ನಿಂತು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರವಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಭರತ್ ಭೂಷಣ್ ಅವರ ಮತ್ತಿಕೆರೆ ನಿವಾಸಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ತೆರಳಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

    ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, “ಜಮ್ಮು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕರ ದಾಳಿಯನ್ನು ನಾವು ಖಂಡಿಸುತ್ತೇವೆ. ಮೊದಲು ದೇಶ ನಂತರ ಉಳಿದ ವಿಚಾರಗಳು. ಈ ದಾಳಿ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕು, ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಬೇಕು. ಭವಿಷ್ಯದಲ್ಲಿ ನಮ್ಮ ಪ್ರಜೆಗಳ ರಕ್ಷಣೆ ಮಾಡಬೇಕು. ಪ್ರತಿಯೊಬ್ಬರ ಜೀವವೂ ಬಹಳ ಮುಖ್ಯವಾದುದು” ಎಂದು ತಿಳಿಸಿದರು.

    ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?

    ಇದು ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಂತಹ ಪರಿಸ್ಥಿತಿಯಲ್ಲಿ ನಾನು ಈ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಕಠಿಣ ಹೆಜ್ಜೆ ಇಡಬೇಕು. ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರು ಭದ್ರತಾ ಸಿಬ್ಬಂದಿಗಳ ಜತೆ ನಿರಂತರ ಸಭೆ ಮಾಡುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಬೇಕು. ಕಾಂಗ್ರೆಸ್ ಪಕ್ಷ ಸರ್ಕಾರದ ನಿರ್ಧಾರಗಳಿಗೆ ಬೆಂಬಲ ನೀಡಲಿದೆ” ಎಂದು ತಿಳಿಸಿದರು,

    ರಾಜತಾಂತ್ರಿಕ ವಿಚಾರವಾಗಿ ಕೇಂದ್ರ ಸರ್ಕಾರದ ತೀರ್ಮಾನಗಳ ಬಗ್ಗೆ ಕೈಗೊಂಡಿರುವ ತೀರ್ಮಾನಗಳು ಪರಿಣಾಮ ಬೀರುತ್ತವೆಯೇ ಎಂದು ಕೇಳಿದಾಗ, “ಅದಷ್ಟೇ ತೀರ್ಮಾನಗಳು ಮಾತ್ರ ಪರಿಣಾಮ ಬೀರುವುದಿಲ್ಲ, ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.