ಕೊಡಗು: ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ!
ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು.
ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ ಮಾಹಿತಿ ನೀಡಿದ್ದಾರೆ.
ಮಿಟ್ಟು ಚಂಗಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೖಹ ಸಚಿವ ಜಿ. ಪರಮೇಶ್ವರ್, ಸಚಿವ ದಿನೇಶ್ ಗುಂಡೂರಾವ್, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡರವರು ಶೋಕ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಪುರಸಭೆ, ಎಂ.ಎಲ್.ಸಿ. ಚುನಾವಣೆಯಲ್ಲಿ ಸ್ಪಧಿ೯ಸಿ ಸೋತಿದ್ದರೂ ರಾಜಕೀಯದಿಂದ ಹತಾಶರಾಗದೇ ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು, ಇಂದಿರಾಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ್, ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಆತ್ಮೀಯರಾಗಿದ್ದರು.
ವಿನೋದ್ ಶಿವಪ್ಪ ಅವರ ಆತ್ಮೀಯ ಗೆಳೆಯರಾಗಿದ್ದ ಮಿಟ್ಟು ಚಂಗಪ್ಪ ಅವರ ತೋಟದ ಬಂಗಲೆಗೆ ಬರುತ್ತಿದ್ದ ಸೂಪರ್ ಸ್ಟಾರ್ ರಜನೀಕಾಂತ್, ಸಾಹಸ ಸಿಂಹ ವಿಷ್ಮುವಧ೯ನ್, ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ನೇಹಿತರೂ ಆಗಿದ್ದರು. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗ್ರತಿಯ ರಾಯಭಾರಿಯಂತೆ ಗಮನಸೆಳೆದಿದ್ದರು. ಕೆಲ ತಿಂಗಳಿನಿಂದ ಅನಾರೋಗ್ಯಕ್ಕೊಳಗಾಗಿ ಮುಳ್ಳುಸೋಗೆ ಮನೆಯಲ್ಲಿಯೇ ವಿಶ್ರಾಂತಿಯಲ್ಲಿದ್ದ ಮಿಟ್ಟು ಚಂಗಪ್ಪ ಅವರನ್ನು ಮಂಗಳವಾರ ರಾತ್ರಿ ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಮೖತರು ಪತ್ನಿ ಯಶಿಕಾ, ಪುತ್ರಿಯರಾದ ಕಾವ್ಯ ಮತ್ತು ಕೖತಿಯನ್ನು ಅಗಲಿದ್ದಾರೆ. ಕೆಪಿಸಿಸಿ, ಡಿಸಿಸಿಯ ಪ್ರಮುಖರು ಮಿಟ್ಟು ಚಂಗಪ್ಪ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.