ಮಂಡ್ಯ :- ಜಮ್ಮು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯವಾಗಿದ್ದು, ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕಿದೆ ಎಂದು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು.
ಗಗನಚುಕ್ಕಿ ಪ್ರೀ ಪ್ಲಾಜಾ ಪರಿಶೀಲನೆ ನಡೆಸಿದ – ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಅರುವನಹಳ್ಳಿ ಗ್ರಾಮದಲ್ಲಿ ಶಾಲಾಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ.
ಇದು ಸಹಿಸಲು ಅಸಾಧ್ಯವಾದ ಕೃತ್ಯವಾದದ್ದು, ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ ವೆಚ್ಚದಲ್ಲಿ ನೀರಾವರಿ, ಕೆರೆ ಅಭಿವೃದ್ಧಿ, ಗ್ರಾಮೀಣ ಭಾಗದ ರಸ್ತೆಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬೇಸಿಗೆ ಕಾಲ ಮುಗಿಯುವುದರೊಳಗೆ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅಭಯ ನೀಡಿದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಸುರೇಶ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ