ರಾಮನಗರ:- ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಕೇಂದ್ರವೇ ಹೊಣೆ ಹೊರಬೇಕು ಎಂದು ಹೆಚ್ ಸಿ ಬಾಲಕೃಷ್ಣ ಹೇಳಿದ್ದಾರೆ.
ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಫೆಲ್ಯೂರ್ ಆಗಿದೆ. ಹಾಗಾಗಿ ಅಮಾಯಕರು ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ
ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಇದಕ್ಕೆ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ದೂರು ಎಂದು ಅಸಮಾಧಾನ ಹೊರಹಾಕಿದ್ದಾರೆ.