ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದೆ.
RCB vs RR: ಬೊಂಬಾಟ್ ಬ್ಯಾಟಿಂಗ್: ರಾಜಸ್ಥಾನ್ ಗೆ 206 ಗುರಿ ನೀಡಿದ ಬೆಂಗಳೂರು!
ಮೊದಲಿಗೆ RCB ಪರ ಬ್ಯಾಟಿಂಗ್ ಶುರುಮಾಡಿದ ವಿರಾಟ್ ಕೊಹ್ಲಿ ಬೊಂಬಾಟ್ ಆಟ ಅಡಿ ತವರಲ್ಲಿ ರನ್ ಗಳ ಬರ ನೀಗಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ 2025 ರ 42 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸುವ ಮೂಲಕ ತಮ್ಮ ತವರಿನಲ್ಲಿ ರನ್ಗಳ ಬರವನ್ನು ಕೊನೆಗೊಳಿಸಿದರು. ಈ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದಲ್ಲದೆ ಕ್ರಿಸ್ ಗೇಲ್ ದಾಖಲೆಯನ್ನು ಮುರಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಸೀಸನ್ನ ಕೊನೆಯ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದರು. ಕಳೆದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕೇವಲ 30 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಅವರು ರಾಜಸ್ಥಾನ ರಾಯಲ್ಸ್ ವಿರುದ್ಧ ಅದ್ಭುತ ಪುನರಾಗಮನ ಮಾಡಿ ಅರ್ಧಶತಕ ಗಳಿಸುವ ಮೂಲಕ ತವರಿನ ಪ್ರೇಕ್ಷಕರ ಮುಖದಲ್ಲಿ ನಗು ತರಿಸಿದರು.
ಇದರೊಂದಿಗೆ, ವಿರಾಟ್ ಕೊಹ್ಲಿ ಈಗ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲು ಬ್ಯಾಟಿಂಗ್ ಮಾಡುವಾಗ ಅತಿ ಹೆಚ್ಚು ರನ್ (50 ಕ್ಕಿಂತ ಹೆಚ್ಚು) ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ 62 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ವಿಚಾರದಲ್ಲಿ ಕೊಹ್ಲಿ ನಂತರ ಪಾಕಿಸ್ತಾನದ ಬಾಬರ್ ಅಜಮ್ ಇದ್ದಾರೆ.
ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ನ ಸ್ಫೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಮೊದಲು ಬ್ಯಾಟಿಂಗ್ ಮಾಡುವಾಗ 57 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 55 ಬಾರಿ ಈ ಸಾಧನೆ ಮಾಡಿದ್ದಾರೆ.