ಬೆಂಗಳೂರು: ಪದ್ಮವಿಭೂಷಣ ಪುರಸ್ಕೃತ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(84) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆ.ಕಸ್ತೂರಿರಂಗನ್ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು.
ಕೆ. ಕೃಷ್ಣಸ್ವಾಮಿ ಅವರು ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಾಜಿ ಅಧ್ಯಕ್ಷ ಮತ್ತು ಭಾರತ ಸರ್ಕಾರದ ಕಾರ್ಯದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ ಡಾ. ಕಸ್ತೂರಿರಂಗನ್ ಅವರು ನಿಧನರಾಗಿದ್ದಾರೆ.
ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಇವರು ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಅದ್ಭುತವಾಗಿ ಮುನ್ನಡೆಸಿದ್ದರು.