ಬೆಂಗಳೂರು: ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇವರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಹೆಮ್ಮೆಯ ಪುತ್ರ, ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿ,
ಭಾರತೀಯ ಬಾಹ್ಯಾಕಾಶ ಸಂಸ್ಥೆ @isro ವಿಶ್ರಾಂತ ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷರೂ ಆಗಿದ್ದ ಪದ್ಮವಿಭೂಷಣ ಡಾ.ಕಸ್ತೂರಿರಂಗನ್ ಅವರ ನಿಧನದ ವಾರ್ತೆ ಕೇಳಿ ನನಗೆ ಅತೀವ ದುಃಖ ಉಂಟಾಯಿತು. ಅವರ ಜೊತೆ ನನಗೆ ಆತ್ಮೀಯ ಬಾಂಧವ್ಯವಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಅವರು ನೀಡಿದ ಮಾರ್ಗದರ್ಶನ, ಸಲಹೆ, ಸಹಕಾರವನ್ನು ನಾನೆಂದಿಗೂ ಮರೆಯಲಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
“ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು. ಅವರು ಬೆಂಗಳೂರು ನಗರದ ಜೊತೆ ಭಾವನಾತ್ಮಕ ಬೆಸುಗೆ ಹೊಂದಿದ್ದರು. ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು. ರಾಜ್ಯಸಭೆ ಸದಸ್ಯರಾಗಿ ದೇಶದ ಮಹತ್ವಪೂರ್ಣ ನೀತಿಗಳನ್ನು ರೂಪಿಸುವಲ್ಲಿಯೂ ನಿರ್ಣಾಯಕ ಪಾತ್ರ ವಹಿಸಿದ್ದರು.
ಅವರ ಅಗಲಿಕೆ ರಾಷ್ಟ್ರಕ್ಕೆ ಬಹುದೊಡ್ಡ ನಷ್ಟ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.”ಅಗಲಿದ ಶ್ರಿಯುತರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರು, ಅಭಿಮಾನಿ ವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಎಕ್ಸ್ ಪೋಸ್ಟ್ನಲ್ಲಿ ಪ್ರಾರ್ಥಿಸಿದ್ದಾರೆ.