ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಆಗುತ್ತಿದ್ದಂತೆಯೇ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಇದೀಗ ಕ್ಷಮೆಯಾಚಿಸಿದ್ದಾರೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನಲ್ಲಿ (KRS) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಮಾತನಾಡಬಾರದಿತ್ತು, ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಹೀಗಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ದೇಶದಲ್ಲಿ ಆಯಾ ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ಸದ್ಯ ಕಾಶ್ಮೀರದಲ್ಲಿ ನರಮೇಧ ಮಾಡಿರುವವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.