ಮೈಸೂರು:– ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪಿ ಮೌಲ್ವಿ ಮುಷ್ತಾಕ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Rain News: ವಿಜಯಪುರದಲ್ಲಿ ಗುಡುಗು ಸಹಿತ ಭಾರೀ ಮಳೆ -ಸಂಚಾರ ಅಸ್ತವ್ಯಸ್ತ!
ಆರೋಪಿ ಮೌಲ್ವಿ ಮುಷ್ತಾಕ್, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಮುಸ್ಲಿಂ ಯುವಕರು ಕಲ್ಲು ತೂರಲು ಪ್ರೇರೇಪಣೆ ಮಾಡಿದ್ದ ಆರೋಪ ಹೊತ್ತಿದ್ದ. ಘಟನೆ ಬಳಿಕ ಆರೋಪಿ ನಾಪತ್ತೆಯಾಗಿದ್ದ. 11 ದಿನಗಳ ಬಳಿಕ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದರು.
ಜಾಮೀನಿಗಾಗಿ ಆರೋಪಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.