ಮಂಡ್ಯ:- ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿರುವ ಘಟನೆ ಜರುಗಿದೆ
ಕುಲದಲ್ಲಿ ಕೀಳ್ಯಾವುದೋ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಸಾಲುಮರದ ತಿಮ್ಮಕ್ಕ
ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಂದು ಬೆಳಗ್ಗಿನ ಜಾವ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಬಳಿ ಇದ್ದಕ್ಕಿದ್ದಂತೆ ಬಸ್ನಲ್ಲಿ ಬೆಂಕಿ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್ನಲ್ಲಿ ಇದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲೆಗೇಜ್ ಸಹಿತ ಕೆಳಗೆ ಇಳಿಯಲು ಹೇಳಿದ್ದಾನೆ. ಬಳಿಕ ಎಲ್ಲಾ ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿಸಿದಿದ್ದಾರೆ.
ಬಳಿಕ ಬಸ್ನಲ್ಲಿ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡ ನೋಡುತ್ತಿದ್ದಂತೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ನ ಬೆಂಕಿಯನ್ನು ಹಾರಿಸಿದ್ದಾರೆ