ಕಲಬುರಗಿ : ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರಗಿಯಲ್ಲಿ ಎಟಿಎಂ ದರೋಡೆ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರು ಮೇಲೆಯೇ ಆರೋಪಿಗಗಳು ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಹರಿಯಾಣ ಮೂಲದ ತಸ್ಲಿಂ & ಶರೀಫ್ ಕಾಲಿಗೆ ಗುಂಡೇಟು ತಗುಲಿದೆ. ಈ ಇಬ್ಬರು ಆರೋಪಿಗಳು ಮತ್ತೊಂದು ದರೋಡೆಗೆ ಹೊಂಚು ಹಾಕುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.