ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ.
ಹೌದು, ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತಪಟ್ಟ ವ್ಯಕ್ತಿ. ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.ಇನ್ನೂ ಈ ಘಟನೆಗೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಘಟನೆ ಖಂಡಿಸಿ ಗ್ರಾಮಸ್ಥರು ಹಾಗೂ ಇತರರು ಕೆಎಸ್ ಆರ್ ಟಿಸಿ ಸಂಸ್ಥೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಸ್ ಚಾಲಕರು ಇತ್ತಿಚಿನ ದಿನಗಳಲ್ಲಿ ವೇಗದಿಂದ ಬಸ್ ಓಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ರು.ಇನ್ನೂ ಸ್ಥಳದಲ್ಲಿದ್ದ ಪೋಲಿಸರು ಹೋರಾಟಗಾರರಿಗೆ ತಿಳಿ ಹೇಳಿ ಕಳುಹಿಸಿದರು.