ಚಾಮರಾಜನಗರ : ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಬಳ್ಳಿ ಕೆರೆಯಲ್ಲಿ ನಡೆದಿದೆ.
ಕಳೆದ ಶುಕ್ರವಾರ ಘಟನೆ ನಡೆದಿದ್ದು, ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಕೃಷ್ಷಪುರ ಗ್ರಾಮದ ಅಭಯ್ ಹಾಗೂ ವೃಷಬೇಂದ್ರ ಎಂಬ ಬಾಲಕರು ಕೆರೆಗೆ ಈಜಲು ಹೋಗಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೆಲಸ ಮಾಡಬೇಕು ; ಸಚಿವ ಈಶ್ವರ್ ಖಂಡ್ರೆ
ಬೇಸಿಗೆಯಾದ್ದರಿಂದ ಕೆರೆಯಲು ಈಜಲು ತೆರಳಿರಬಹುದು ಎಂದು ಅನುಮಾನ ವ್ಯಕ್ತ ಪಡಿಸಿಲಾಗಿದೆ. ಇವರಿಬ್ಬರ ಬಟ್ಟೆಗಳು ಕೆರೆ ದಡದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನು ಅಗ್ನಿಶಾಮಕ ಸಿಬ್ಬಂದಿ, ನುರಿತ ಈಜುಗಾರರು ಕೆರೆಯಲ್ಲಿ ಶವಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದು ಇನ್ನೂ ಶವಗಳು ಪತ್ತೆಯಾಗಿಲ್ಲ ಎಂದು ತಿಳಿದಿದೆ.