ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದ ಸಹರಾನ್ಪುರದ ನಿಹಾಲ್ ಖೇಡಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ.
ಪಟಾಕಿ ಕಚೇರಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ದ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರತಿಧ್ವನಿಸಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೂಡಲೇ ಪೊಲೀಸ್ ಸಿಬ್ಬಂದಿ, ವಿಧಿವಿಜ್ಞಾನ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆ ಸಂಬಂಧ ಕಾರ್ಖಾನೆಯ ಮೂವರು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.