ಲಕ್ನೋ:- ನಾನು ಪಾಕಿಸ್ತಾನದವಳಲ್ಲ. ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ ಎಂದು ಸೀಮಾ ಹೈದರ್ ಹೇಳಿದ್ದಾರೆ.
ನಾಳೆ ಡೆಲ್ಲಿ-ಆರ್ ಸಿಬಿ ಹೈವೋಲ್ಟೇಜ್ ಮ್ಯಾಚ್: ತವರಿನ ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು!
ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೇ 48 ಗಂಟೆಗಳಲ್ಲಿ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಿಯಕರನಿಗೋಸ್ಕರ 4 ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗಿದೆ.
ನಾನು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನಾನು ಭಾರತದಲ್ಲಿ ಉಳಿಯಲು ಅವಕಾಶ ನೀಡುವಂತೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಸಚಿನ್ ಮೀನಾ ಅವರನ್ನು ಮದುವೆಯಾದ ಬಳಿಕ ನಾನು ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ. ನನಗೆ ಭಾರತದಲ್ಲಿಯೇ ಇರಲು ಬಿಡಿ ಎಂದು ಸೀಮಾ ವೀಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ.