ಹಾಸನ:- ಇಂದು ಹಾಸನದಲ್ಲಿ ಆಲಿಕಲ್ಲು ಮಳೆ ಆಗಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪಹಲ್ಗಾಮ್ ದಾಳಿ ಖಂಡಿಸಿ ಪ್ರೊಟೆಸ್ಟ್: ಪಾಕ್ ಧ್ವಜದ ಮೇಲೆ ಚಪ್ಪಲಿ ಇಟ್ಟು ಆಕ್ರೋಶ!
ಮಳೆಯ ಜೊತೆಗೆ ಬೀಸಿದ ಬಿರುಗಾಳಿ ಹಲವು ಮನೆಗಳ ಮೇಲ್ಛಾವಣಿಯನ್ನು ನೆಲಕ್ಕೆ ಬೀಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ತಾಲೂಕು ದಂಡಾಧಿಕಾರಿ ಸಂತೋಷ್ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿದ್ದು, ತೊಂದರೆಗೆ ಸಿಲುಕಿರುವ ರೈತರು, ಜನರ ಆಗು ಹೋಗುಗಳಿಗೆ ಸ್ಪಂದಿಸುತ್ತಿದ್ದಾರೆ.
ಮಳೆಯ ನಡುವೆಯೇ ನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ನಗರಸಭೆ ಅಧಿಕಾರಿಗಳು ಮಳೆ, ಗಾಳಿಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಅಲ್ಲದೇ ನಿರಾಶ್ರಿತರಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.