ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
IPL 2025: ಇಂದು ಡೆಲ್ಲಿ-ಆರ್ ಸಿಬಿ ಜಿದ್ದಾಜಿದ್ದಿನ ಫೈಟ್: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬೆಂಗಳೂರು!
ಇಂದಿನಿಂದ ಮೇ.1ರವರೆಗೆ ಕರ್ನಾಟಕದ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ತುಮಕೂರು ಹಾಗೂ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.