ಮುಂಬೈ: ಇಡಿ ಕಚೇರಿಯ ಕಟ್ಟದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಭಾನುವಾರ ಮಧ್ಯಾಹ್ನ 3.33ರ ಸುಮಾರಿಗೆ ಘಟನೆ ನಡೆದಿದ್ದು, ಇದಕ್ಕಿದ್ದಂತೆ ಕಟ್ಟಡದಲ್ಲಿ ಭಾರೀ ಬೆಂಕಿ ಉಂಟಾಗಿದ್ದು, ಇಡಿ ಕಚೇರಿಯ ಐದು ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಾತ್ರ ಬೆಂಕಿ ಉಂಟಾಗಿದೆ. ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ, ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯ ತಹಬದಿಗೆ ತಂದಿದ್ದಾಋೆ.
ಆಷ್ಟರಲ್ಲಾಗಲೇ ಕಡತಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.