2025ರ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ತೋರುತ್ತಿದೆ. ಆರಂಭದಲ್ಲೇ ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್ ಮತ್ತು ನಾಯಕ ರಜತ್ ಪಾಟಿದಾರ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್‌ಸಿಬಿಗೆ ನೆರವಾಗಿದೆ.
ಡಿಸಿ ನೀಡಿದ್ದ 163 ರನ್‌ಗಳ ಗುರಿಯನ್ನು ಇನ್ನು 9 ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿತು. ಈ ಮೂಲಕ, ಟಿ20 ಲೀಗ್‌ನ 18ನೇ ಆವೃತ್ತಿಯಲ್ಲಿ ಆರ್‌ಸಿಬಿ ತವರಿನಿಂದ ಹೊರಗೆ ಸತತ 6ನೇ ಜಯವನ್ನು ದಾಖಲಿಸಿದೆ. ಲೀಗ್ ಇತಿಹಾಸದಲ್ಲಿಯೇ ಈ ಜಯ ಸಾಧಿಸಿದ ಮೊದಲ ತಂಡ ಎಂಬ ಖ್ಯಾತಿ ಪಡೆದಿದೆ.
ಈ ಆವೃತ್ತಿಯಲ್ಲಿ ಆರ್‌ಸಿಬಿ ತವರಿನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ, ತವರಿನಿಂದ ಹೊರಗೆ ಆಡಿರುವ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಔಟಾದ ಬಳಿಕ ಬಂದ ಟಿಮ್ ಡೇವಿಡ್ ಐದು ಎಸೆತಗಳಲ್ಲಿ 19 ರನ್ ಗಳಿಸಿ ಇನ್ನೂ ಒಂಬತ್ತು ಎಸೆತಗಳು ಬಾಕಿ ಇರುವಾಗಲೇ ತಂಡವನ್ನು ಗೆಲುವಿನ ದಡ ಸೇರಿಸಿದರು.
ಕೊಹ್ಲಿ 51 ರನ್ ಗಳಿಸಿದರೆ, ಕೃನಾಲ್ ಪಾಂಡ್ಯ ಐದು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಡೆಲ್ಲಿ ತಂಡಕ್ಕೆ ಆಘಾತ ಉಂಟುಮಾಡಿದರು.
2008ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಬೆಂಗಳೂರು ತಂಡ ಐಪಿಎಲ್ ಪ್ರಶಸ್ತಿಯ ಬರ ಎದುರಿಸುತ್ತಿದ್ದು, ಈ ಆವೃತ್ತಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುನ್ನುಗ್ಗುತ್ತಿದೆ.