ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಒಂದಲ್ಲಾ ಎರಡಲ್ಲ ಬರೋಬ್ಬರಿ 26 ಅಮಾಯಕರು ದಾಳಿಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲೂ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆ ದಿಟ್ಟ ಹೆಜ್ಜೆಯನ್ನಿಟ್ಟಿದೆ.
ಇದರ ನಡುವೆ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಕಣಿವೆಯು ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದರೂ, ಈ ಪ್ರದೇಶವು ಮತ್ತೊಮ್ಮೆ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಸ್ವಾಗತಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ಮುಂಚೆ ಬೆಂಗಳೂರಿನಿಂದ ಶ್ರೀನಗರಕ್ಕೆ ವಿಮಾನದಲ್ಲಿ ತುರ್ತಾಗಿ ತೆರಳಬೇಕಂದರೆ ಒಬ್ಬರಿಗೆ 30 ರಿಂದ 40 ಸಾವಿರ ರೂ. ತಗಲುತಿತ್ತು. ಆದರೆ, ಉಗ್ರರರ ದಾಳಿ ನಂತರ ಈ ದರ 8ರಿಂದ 9 ಸಾವಿರ ರೂ.ಗೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಉಗ್ರರ ದಾಳಿ ಬೆನ್ನಲ್ಲೇ ಕಾಶ್ಮೀರಕ್ಕೆ ತೆರಳುವವರ ಸಂಖ್ಯೆ ಕಡಿಮೆಯಾಗಿರುವುದು.
ಕಾಶ್ಮೀರದಲ್ಲಿ ಬೆಟ್ಟ, ಗುಡ್ಡ, ಕಣಿವೆ, ಹಿಮ ಇರುವ ಕಾರಣ ಬೇಸಿಗೆಯಲ್ಲಿ ಸಮಯ ಕಳೆಯಲು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಿಂದ ಸಾವಿರಾರು ಜನ ಪ್ರವಾಸ ಮಾಡುತ್ತಾರೆ. ಕಾಶ್ಮೀರ ಭಾರತದ ಸ್ವಿಜರ್ಲೆಂಡ್ ಎಂದೇ ಕರೆಯಲ್ಪಡುತ್ತದೆ. ಬೇಸಿಗೆಯ ಎರಡೂರು ತಿಂಗಳ ಅವಧಿಯಲ್ಲಿ ಸುಮಾರು 2 ಲಕ್ಷ ಪ್ರವಾಸಿಗರು ಕರ್ನಾಟಕದಿಂದಲೇ ಪ್ರಯಾಣ ಮಾಡುತ್ತಾರೆ.
ಬೆಂಗಳೂರಿನಲ್ಲಿ 2,500 ಟ್ರಾವೆಲ್ಸ್ ಏಜೆನ್ಸಿಗಳಿವೆ. ನಿತ್ಯ ಬೆಂಗಳೂರಿನಿಂದ ಶ್ರೀನಗರಕ್ಕೆ 2 ನೇರ ವಿಮಾನಗಳು ಹಾರುತ್ತವೆ. ಅಲ್ಲದೇ ದೇಶದೆ ಬೇರೆ ನಗರಗಳಿಂದಲೂ ಕನ್ನಡಿಗರು ಶ್ರೀನಗರಕ್ಕೆ ತೆರಳುತ್ತಾರೆ. ಹೀಗಾಗಿ, ಬೇಸಿಗೆಯಲ್ಲಿ ಜಮ್ಮು-ಕಾಶ್ಮೀರಕ್ಕೆ ಪ್ರವಾಸ ಮಾಡುವವರ ಸಂಖ್ಯೆ ದೊಡ್ಡದಿದೆ. ಉಗ್ರರ ದಾಳಿ ಘಟನೆ ಹಿನ್ನೆಲೆಯಲ್ಲಿ ಖಂಡಿತವಾಗಿ ಈಗ ಎಲ್ಲರಿಗೂ ಭಯ ಕಾಡುತ್ತ್ತಿದೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.