ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಒಂದಲ್ಲಾ ಎರಡಲ್ಲ ಬರೋಬ್ಬರಿ 26 ಅಮಾಯಕರು ದಾಳಿಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲೂ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆ ದಿಟ್ಟ ಹೆಜ್ಜೆಯನ್ನಿಟ್ಟಿದೆ.
ಇದರ ನಡುವೆ ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಇದೇ ಹೊತ್ತಿನಲ್ಲಿ ದಾಳಿಯ ತನಿಖೆ ಹೊಣೆ ಹೊತ್ತಿರುವ ಎನ್ಐಎ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿದ್ದು, ಭರತ್ ಪತ್ನಿ ಬಳಿ ಸಾಕಷ್ಟು ಮಾಹಿತಿ ಸಂಗ್ರಹಿಸಿದೆ. ದಾಳಿ ಸಂದರ್ಭದ ಬಗ್ಗೆ ಹೇಳಿಕೆ ಪಡೆದಿದೆ. ಶಿವಮೊಗ್ಗದ ಮಂಜುನಾಥ್ ಮನೆಗೂ ತೆರಳಲಿರುವ ಎನ್ಐಎ ತಂಡ, ಮಂಜುನಾಥ್ ಪತ್ನಿ ಪಲ್ಲವಿ ಅವರಿಂದಲೂ ಮಾಹಿತಿ ಕಲೆ ಹಾಕಲಿದೆ.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ನಾಲ್ವರು ಅಧಿಕಾರಿಗಳ ತಂಡ ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು ವಿಚಾರಣೆ ನಡೆಸಿದೆ. ಈ ವೇಳೆ ಘಟನೆ ಬಗ್ಗೆ ಕೆಲ ಮಾಹಿತಿ ಕಲೆ ಹಾಕಿದ ತಂಡ, ಶಂಕಿತ ಉಗ್ರರ ರೇಖಾಚಿತ್ರಗಳನ್ನು ತೋರಿಸಿ ಹೇಳಿಕೆ ಪಡೆದಿದ್ದಾರೆ. ಎನ್ಐಎ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯವನ್ನು ಕಣ್ಣಾರೆ ಕಂಡಿದ್ದ ಸುಜಾತಾ ಕಂಡಿದ್ದೆಲ್ಲವನ್ನು ವಿವರಿಸಿದ್ದಾರೆ.
ಮುಂದೆಯೂ ತನಿಖೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಇಷ್ಟಲ್ಲದೇ ಉಗ್ರರ ದಾಳಿಗೆ ಬಲಿಯಾದ ಎಲ್ಲರ ಮನೆಗೂ ಹೋಗಿ ಎನ್ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಉಗ್ರರ ದಾಳಿಯಲ್ಲಿ ಹತರಾಗಿದ್ದ ಶಿವಮೊಗ್ಗದ ಮಂಜುನಾಥ್ ಅವರ ಮನೆಗೂ ತೆರಳಿ ಅವರ ಪತ್ನಿ ಪಲ್ಲವಿ ಅವರಿಂದ ಎನ್ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಲಿದ್ದಾರೆ.