ಅಂಕಾರಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಟರ್ಕಿ ಯುದ್ಧ ಉಪಕರಣಗಳನ್ನು ಕಳುಹಿಸುವ ಮೂಲಕ ಇಸ್ಲಾಮಾಬಾದ್‌ಗೆ ತನ್ನ ಬೆಂಬಲವನ್ನು ತೋರಿಸಿದೆ ಎಂಬ ಸುದ್ದಿ ಹರಡಿತ್ತು.
ಇದರ ನಡುವೆ ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು ಬಂದರೆ ಅವುಗಳನ್ನು ಪರಿಗಣಿಸಬಾರದು ಎಂದು ಟರ್ಕಿ ರಕ್ಷಣಾ ಸಚಿವಾಲಯ ತಿಳಿಸಿದೆ.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದೆ ಎಂದು ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಬಳಿಕ ಟರ್ಕಿ ಸರಕು ವಿಮಾನದ ಚಿತ್ರವನ್ನು ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದೆ.
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಅಂಕಾರಾ ಖಂಡಿಸಿತ್ತು. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು, ಅನೇಕರು ಗಾಯಗೊಂಡಿದ್ದರು.