ಬೆಂಗಳೂರು: ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ.
ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ.
ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಸವಾಲು ಹಾಕಿದ್ದಾರೆ. ಸಿಎಂ ರೇವಂತ್ ರೆಡ್ಡಿ ಕೂಡ ದೇಶಭಕ್ತಿ ಪ್ರದರ್ಶಿಸಿದ್ದಾರೆ. ಇವರೆಲ್ಲರೂ ಅಂಥವರ ಬಳಿ ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕು. ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿನ ಕಾಂಗ್ರೆಸ್ ನಾಯಕರು ಎಲ್ಲಕ್ಕೂ ಪ್ರಧಾನಿ ಮೋದಿಯನ್ನು ಪ್ರಶ್ನಿಸುತ್ತಿದ್ದಾರೆ ಎಂದರು.