ಬೆಂಗಳೂರು:- ಉತ್ತರ ಕರ್ನಾಟಕ ಮಂದಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದ್ದು, ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
IPL 2025: ತವರಲ್ಲಿ ಡೆಲ್ಲಿಗೆ ಮತ್ತೊಂದು ಸೋಲಿನ ಆಘಾತ: ಮಹತ್ವದ ಪಂದ್ಯದಲ್ಲಿ ಗೆದ್ದು ಬೀಗಿದ ಕೋಲ್ಕತ್ತಾ!
ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ
ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.