ಕಾರವಾರ: ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ. ಭಾರತದ ಸೇನೆಯ ಈ ಸಮರಾಭ್ಯಾಸ ಪಾಕಿಸ್ತಾನಕ್ಕೆ ನಡುಕವನ್ನು ಉಂಟು ಮಾಡಿದೆ. ಇದರ ನಡುವೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
ಗೋಕರ್ಣ, ಮುರುಡೇಶ್ವರದಲ್ಲಿ ಪೊಲೀಸ್ ಹೈಅಲರ್ಟ್ ಆಗಿದ್ದಾರೆ. ಹೋಮ್ ಸ್ಟೇ ,ರೆಸಾರ್ಟ್ಗಳಲ್ಲಿ ಪ್ರವಾಸಿಗರ ಮಾಹಿತಿ ಕಲೆಹಾಕುತ್ತಿದ್ದಾರೆ. ಎಲ್ಲೆಡೆ ಪ್ರವಾಸಿ ತಾಣಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಜಿಲ್ಲೆಯ ಹೋಟೆಲ್, ಲಾಡ್ಜ್, ಹೋಮ್ ಸ್ಟೇಗಳಲ್ಲಿ ಕಡ್ಡಾಯ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಿದ್ದಾರೆ. ಹೊರ ರಾಜ್ಯ, ವಿದೇಶಿ ಪ್ರವಾಸಿಗರ ಮಾಹಿತಿಯನ್ನೂ ಪೊಲೀಸರು ಕಲೆಹಾಕಿದ್ದಾರೆ.
ಕರಾವಳಿ ಸಮುದ್ರ ಭಾಗದಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ಕೋಸ್ಟ್ ಗಾರ್ಡ್ನಿಂದ ಕೂಮಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಸಮುದ್ರ ಮಾರ್ಗದಲ್ಲಿ ಬೋಟುಗಳ ದಾಖಲೆ ತಪಾಸಣೆ ಮಾಡುತ್ತಿದ್ದಾರೆ.