ಬೆಂಗಳೂರು :- ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಆರು ದಿನಗಳು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ನಿಮ್ಮ ಅಡುಗೆ ಮನೆಯಲ್ಲಿ ಸಿಗುವ ಕಾಳುಮೆಣಸಿನ ಪ್ರಯೋಜನ ತಿಳಿದಿದ್ದೀರಾ!?
ಮುಂದಿನ 03 ದಿನ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬರಬಹುದು ಎನ್ನಲಾಗಿದೆ. ನಂತರ ಮೂರು ದಿನ ಭರ್ಜರಿ ಮಳೆ ಆರ್ಭಟ ಕಂಡು ಬರಲಿದೆ. ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.
ಮೇ 6ರವರೆಗೆ ಬೆಂಗಳೂರು ನಗರ ಸೇರಿದಂತೆ ಬೆಂಗಳುರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಸೇರಿದಂತೆ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ