ಬೆಂಗಳೂರು:- ಜನಗಣತಿಯೊಂದಿಗೆ ಜಾತಿ ಗಣತಿಗೆ ತೀರ್ಮಾನಿಸಿರುವ ಕೇಂದ್ರದ ನಿರ್ಧಾರವನ್ನು ಸಚಿವ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದು ಮೋದಿ ಅವರ ದಿಟ್ಟ ಹೆಜ್ಜೆ ಎಂದಿದ್ದಾರೆ.
ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ: ಓರ್ವ ಕಾರ್ಮಿಕ ಸಾವು, 8 ಮಂದಿಗೆ ಗಾಯ!
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆ ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದರು