ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರ್ತವ್ಯ ಮರೆತು ಬಸ್ ನಲ್ಲೇ ನಮಾಜ್ ಪ್ರಕರಣ: KSRTC ಚಾಲಕನ ವಿರುದ್ಧ ತನಿಖೆಗೆ ಆದೇಶಿಸಿದ ರಾಮಲಿಂಗಾ ರೆಡ್ಡಿ!
ವಾಯುವ್ಯ ರಾಜಸ್ಥಾನದ ಮೇಲಿರುವ ಮೇಲ್ಮೈ ಸುಳಿಗಾಳಿಯಿಂದ ಉತ್ತರ ಕೇರಳದವರೆಗೆ ಒಂದು ರೇಖೆ ಇದೆ. ಇದು ಆಗ್ನೇಯ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ, ಒಳ ಕರ್ನಾಟಕದ ಮೂಲಕ ಹಾದುಹೋಗುತ್ತದೆ. ಅಲ್ಲದೆ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಮೇಲೆ 0.9 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ , ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು ಮತ್ತು ಕೊಪ್ಪಳ ,ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.,